ಹುಬ್ಬಳ್ಳಿ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಭೀಕರವಾಗಿ ಕೊಂದ ದುರುಳ!

ಎಪ್ರಿಲ್ 13, 2025 - 16:48
 0  10
ಹುಬ್ಬಳ್ಳಿ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಭೀಕರವಾಗಿ ಕೊಂದ ದುರುಳ!

ಹುಬ್ಬಳ್ಳಿ: ಹೆಣ್ಣು ಮಕ್ಕಳು ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ಕಡಿಮೆ ಎನ್ನುವಂತಾಗಿದೆ. ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾದ ಅಜ್ಜಿಯವರೆಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರ ಕೊಲೆ ಮಾಡಿದ ಅಮಾನುಷ ಘಟನೆ ಹುಬ್ಬಳ್ಳಿಯ ಅಶೋಕನಗರ ವ್ಯಾಪ್ತಿಯಲ್ಲಿ ನಡೆದಿದೆ.

ಬಿಹಾರ ಮೂಲದ ಸೈಕೋಪಾತ್‌ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದಾರೆ. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್‌ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್‌ ಆಗಿದ್ದಾನೆ. 

ಆರೋಪಿ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಠಾಣಾ ಮುಂದೆ ಸ್ಥಳೀಯರ ಪ್ರತಿಭಟನೆ ನಡೆಸಿದ್ದಾರೆ. ಕೊಲೆಗಡುಕನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಲೆಗಡುಕನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿದ್ದಾರೆ.

ಎನ್ಕೌಂಟರ್ ಮಾಡಿ ಅಥವಾ ನಮ್ಮ ಕೈಗೆ ನೀಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆ ಮುಂದೆ ಆಟ ಆಡುತ್ತಿರುವ ಬಾಲಕಿಯನ್ನ ಎತ್ತಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕನಗರ ಠಾಣೆ ಪೊಲೀಸ್ ತನಿಖೆ ಮುಂದುವರೆಸಿದ್ದು, ಸೈಕೋಪಾತ್ ಬಂಧನಕ್ಕೆ ಜಾಲ ಬೀಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow