ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ದುರಂತ: ಮತ್ತೊಂದು ಜೀವ ಬಲಿ..! ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದ 9 ಜನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಪೈಕಿ ಗುರುವಾರ ಇಬ್ಬರು ಹಾಗೂ ಇಂದು ಬೆಳ್ಳಗ್ಗೆ ಒಬ್ಬರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇದೀಗ ಮತ್ತೋರ್ವ ಅಯ್ಯಪ್ಪಸ್ವಾಮಿ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಲಿಂಗರಾಜ ಬೀರನೂರ(19) ಎನ್ನುವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಉಣಕಲ್ ಹತ್ತಿರದ ಸಾಯಿ ನಗರದಲ್ಲಿ ಸೋಮವಾರ ಬೆಳಗಿನ ಜಾವ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿದ್ದರು.
ಎಲ್ಲರಿಗೂ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇದೀಗ ಒಟ್ಟು ನಾಲ್ವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಇಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






