ಹೆತ್ತ ಮಗಳನ್ನೇ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ತಾಯಿ
ಶಿವಮೊಗ್ಗ:- ತಾಯಿಯೇ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್ನಲ್ಲಿ ಜರುಗಿದೆ.
ಶೃತಿ (38) ನೇಣಿಗೆ ಶರಣಾದ ಮಹಳೆ. ಮಹಿಳೆ ಆತ್ಮಹತ್ಯೆಗೂ ಮುನ್ನ ಮಗಳಿಗೆ ಮಚ್ಚಿನಿಂದ ಹೊಡೆದು ಕೊಂದಿದ್ದಾಳೆ. ಬಳಿಕ ಆಕೆಯ ಮೃತದೇಹದ ಮೇಲೆ ನಿಂತುಕೊಂಡ ಪ್ಯಾನ್ಗೆ ನೇಣುಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶೃತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಳು ಎನ್ನಲಾಗಿದೆ.
ಮಹಿಳೆಯ ಪತಿ ರಾಮಣ್ಣ ಮೆಗ್ಗಾನ್ ಆಸ್ಪತ್ರೆಯಲ್ಲಿ ನೈಟ್ ಶಿಫ್ಟ್ ಡ್ಯೂಟಿಯಲ್ಲಿದ್ದರು. ಬೆಳಗ್ಗೆ ಕೆಲಸ ಮುಗಿಸಿ ಕ್ವಾಟ್ರಸ್ಗೆ ಬಂದಾಗ ವಿಷಯ ತಿಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?