ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ 513 ಡ್ರಿಂಕ್ & ಡ್ರೈವ್ ಕೇಸ್ ದಾಖಲು.!
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹೊಸ ವರ್ಷ 2025ನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‌ನಂತಹ ಪ್ರಮುಖ ಸ್ಥಳಗಳಲ್ಲಿ ಯುವಜನರು ಸೇರಿದಂತೆ ಅಪಾರ ಜನಸಮೂಹ ಕೇಕ್ ಕತ್ತರಿಸಿ, ಪಟಾಕಿ ಸಿಡಿಸುವುದರ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡರು. ಇನ್ನೂ ಹೊಸ ವರ್ಷದ ಸಂಭ್ರಮದಲ್ಲಿ ಎಣ್ಣೆ ಪಾರ್ಟಿ ಮಾಡಿ ವಾಹನ ಚಲಾಯಿಸಿದವರ ಮೇಲೆ, ಒಂದೇ ರಾತ್ರಿಯಲ್ಲಿ ಬರೋಬ್ಬರಿ 513 ಕೇಸ್ ಬಿದ್ದಿದೆ.
ನ್ಯೂ ಇಯರ್ ರಾತ್ರಿ 513 ಡ್ರಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿವೆ. ಈ ಸಂದರ್ಭದಲ್ಲಿ ಸಂಚಾರ ಪೊಲೀಸರು ಸುಮಾರು 28,127 ವಾಹನಗಳ ಪರಿಶೀಲನೆ ಮಾಡಿದ್ದರು. ಹೊಸ ವರ್ಷದ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸಂಭ್ರಮ ಮನೆ ಮಾಡಿತ್ತು. ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್, ವೈಟ್‌ಫೀಲ್ಡ್ ಮೊದಲಾದ ಕಡೆ ಯುವಜನತೆ ನ್ಯೂ ಇಯರ್ ಸಂಭ್ರಮದಲ್ಲಿ ತೇಲಿದರು.
ನಿಮ್ಮ ಪ್ರತಿಕ್ರಿಯೆ ಏನು?