ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿಸಿದ ಸಿದ್ದರಾಮಯ್ಯ ಸರ್ಕಾರ ಹಿಟ್ಲರ್ ಸರ್ಕಾರ: ನಿರಾಣಿ

ಡಿಸೆಂಬರ್ 12, 2024 - 12:00
 0  10
ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿಸಿದ ಸಿದ್ದರಾಮಯ್ಯ ಸರ್ಕಾರ ಹಿಟ್ಲರ್ ಸರ್ಕಾರ: ನಿರಾಣಿ

ಬೆಳಗಾವಿ: ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿಸಿದ ಸಿದ್ದರಾಮಯ್ಯ ಸರ್ಕಾರ ಹಿಟ್ಲರ್ ಸರ್ಕಾರ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ್ ನಿರಾಣಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಮಾಯಕ ಹೋರಾಟಗಾರರ ಕೈ ಮುರಿದಿವೆ. ತಲೆ ಒಡೆದು ಗಂಭೀರ ಗಾಯಗಳಾಗಿವೆ.

ನಮ್ಮ ಬಿಜೆಪಿ ಸರ್ಕಾರ ಇದ್ದಾಗ ಹೋರಾಟಗಾರರ ಮೇಲೆ ಎಂದೂ ಬಲಪ್ರಯೋಗ ಮಾಡಿಲ್ಲ. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಮಾಯಕ ಹೋರಾಟಗಾರರ ಮೇಲೆ ದಬ್ಬಾಳಿಕೆ ಮಾಡಿದೆ. ಪಂಚಮಸಾಲಿ ಸಮಾಜದ ಜನ ಮುಂದೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸ್ಥಳಕ್ಕೆ ಬಂದು ಮನವಿ ಪಡೆಯದೆ ನೆಪ ಮಾತ್ರಕ್ಕೆ 10 ಜನರನ್ನು ಭೇಟಿಯಾಗಲು ಹೇಳಿದ್ದೇ ಅವರೇ ಬರಲಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಇದರಿಂದ ಹೋರಾಟಗಾರರ ಸಹನೆ ಕಟ್ಟೆ ಒಡೆದಿದೆ. ಆದರೂ ಶಾಂತ ರೀತಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರು. ಆದರೆ ಸರ್ಕಾರ ಹೋರಾಟಗಾರರ ಮನವೊಲಿಸುವ ಬದಲು ಲಾಠಿ ಚಾರ್ಜ್‌ ಮಾಡಿ ಹಿಟ್ಲರ್ ಧೋರಣೆ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow